“ಗೃಹ ಲಕ್ಷ್ಮಿ” Gruha Lakshimi ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತಂದಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಗಂಡ ಇದ್ದರೆ ಗಂಡನ ಆಧಾರ್ ಕಾರ್ಡ್ ಬೇಕು
*ಈ ಯೋಜನೆಯ ಷರತ್ತುಗಳು ಹಾಗೂ ನಿಯಮಗಳು*
Gruha Lakshimi ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅಂತ್ಯೋದಯ, BPL ಮತ್ತು APL ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹರು ಅವರು ಅರ್ಜಿ ಸಲ್ಲಿಸಬಹುದು.
- ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಲಾಭ ಸಿಗುತ್ತದೆ.
- ಅರ್ಜಿದಾರರು Online ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
- ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು.
- ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ Bank Account ಮತ್ತು Aadhaar Card ಗಳನ್ನು Link ಮಾಡಬೇಕು.
- ಈ ಕೆಳಗೆ ತಿಳಿಸಿರುವ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
- ಕುಟುಂಬದ ಯಜಮಾನಿ or ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ.
- ಕುಟುಂಬದ ಯಜಮಾನಿ or ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ .
- ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿಯಮದಲ್ಲಿಇದೆ ಅರ್ಜಿ ಸಲ್ಲಿಸುವ ಮೊದಲು ಕೆಳಗೆ ಲಿಂಕ್ ಇದೆ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಿ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ